ನೆಲಮಂಗಲ: ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ.
ಹೊಟ್ಟೆನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು - ವಾಜರಹಳ್ಳಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಸಾವು ಸುದ್ದಿ
ವಿಪರೀತ ಹೊಟ್ಟೆನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನೆಲಮಂಗಲ ತಾಲೂಕಲ್ಲಿ ನಡೆದಿದೆ.
![ಹೊಟ್ಟೆನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು nursing student suicide](https://etvbharatimages.akamaized.net/etvbharat/prod-images/768-512-9225367-903-9225367-1603035566412.jpg)
ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
ಚೈತ್ರಾ(19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಮೃತ ಯುವತಿ ವಾಜರಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಂಜುಳ ಎಂಬುವರ ಪುತ್ರಿ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಮ್ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.