ಕರ್ನಾಟಕ

karnataka

ETV Bharat / state

ಒಂದು ದಿನದ ವೇತನ ಕಡಿತ: ವೈದ್ಯಕೀಯ ಸಿಬ್ಬಂದಿಯಿಂದ ವಿರೋಧ

ವೈದ್ಯಕೀಯ ಸಿಬ್ಬಂದಿಯ ವೇತನ ಕಡಿತ ಮಾಡುವ ಬದಲಾಗಿ ಕಳೆದ 15 ದಿನಗಳಿಂದ ಮನೆಯಲ್ಲಿ ಕುಳಿತಿರುವ ವಿಧಾನಸೌಧ, ವಿಕಾಸಸೌಧ ಸಿಬ್ಬಂದಿಯ ವೇತನ ಕಡಿತ ಮಾಡಿಕೊಳ್ಳಿ ಎಂದು ವೈದ್ಯಕೀಯ ಸಿಬ್ಬಂದಿ ಆಗ್ರಹಿಸಿದ್ದಾರೆ.

By

Published : Apr 4, 2020, 8:51 PM IST

One-day pay cuts for government employees;  opposition of medical staff
ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ; ವೈದ್ಯಕೀಯ ಸಿಬ್ಬಂದಿ ತೀವ್ರ ವಿರೋಧ

ಬೆಂಗಳೂರು: ಕೊರೊನಾ ಪೀಡಿತರ ಪರಿಹಾರಕ್ಕಾಗಿ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ ಹಿನ್ನೆಲೆ ವೈದ್ಯಕೀಯ ಸಿಬ್ಬಂದಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ: ವೈದ್ಯಕೀಯ ಸಿಬ್ಬಂದಿಯ ತೀವ್ರ ವಿರೋಧ
ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ; ವೈದ್ಯಕೀಯ ಸಿಬ್ಬಂದಿಯ ತೀವ್ರ ವಿರೋಧ
ವೇತನ ಕಡಿತ ಮಾಡದಂತೆ ಹಲವು ವೈದ್ಯರು, ಸಿಬ್ಬಂದಿ ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ವೈದ್ಯಕೀಯ ಸಿಬ್ಬಂದಿಯ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಹಗಲು ರಾತ್ರಿ ನಮ್ಮ ಜೀವದ ಹಂಗು ತೊರೆದು, ಕುಟುಂಬ ಬಿಟ್ಟು ಕೆಲಸ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿ ವೈದ್ಯಕೀಯ ಸಿಬ್ಬಂದಿಗೆ ಒಂದು ತಿಂಗಳ ಹೆಚ್ಚಿಗೆ ವೇತನ ನೀಡಿ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ನಮ್ಮ ಸರ್ಕಾರ ವೇತನ ಕಡಿತ ಮಾಡುವ ಮೂಲಕ ಆತ್ಮ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ. ಕಳೆದ ಒಂದು ತಿಂಗಳಿಂದ ಸರ್ಕಾರ ವೈದ್ಯಕೀಯ ಸಿಬ್ಬಂದಿಯ ರಜೆ ರದ್ದು ಮಾಡಿದೆ. ಹಬ್ಬದ ದಿನಗಳಲ್ಲಿಯೂ ವೈದ್ಯಕೀಯ ಸಿಬ್ಬಂದಿ ಕೆಲಸ ಮಾಡಿದ್ದಾರೆ. ವೈದ್ಯಕೀಯ ಸಿಬ್ಬಂದಿಯ ವೇತನ ಕಡಿತ ಮಾಡಬಾರದು. ಬದಲಾಗಿ ಕಳೆದ 15 ದಿನಗಳಿಂದ ಮನೆಯಲ್ಲಿ ಕುಳಿತಿರುವ ವಿಧಾನಸೌಧ, ವಿಕಾಸಸೌಧ ಸಿಬ್ಬಂದಿಯ ವೇತನ ಕಡಿತ ಮಾಡಿಕೊಳ್ಳಿ ಎಂದು ವೈದ್ಯಕೀಯ ಸಿಬ್ಬಂದಿ ಆಗ್ರಹಿಸಿದ್ದಾರೆ.

For All Latest Updates

ABOUT THE AUTHOR

...view details