ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬರುವ ಪ್ರಯಾಣಿಕರ ತಪಾಸಣೆ ನಡೆಸುವ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಗಳು ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: 1.01 ಕೋಟಿ ಮೌಲ್ಯದ ಚಿನ್ನ ವಶಕ್ಕೆ - Devanahalli Kempegowda International Airport
ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.
![ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: 1.01 ಕೋಟಿ ಮೌಲ್ಯದ ಚಿನ್ನ ವಶಕ್ಕೆ operation-of-bangalore-customs-officers-gold-worth-rs-1-dot-01-crore-seized-from-three-cases](https://etvbharatimages.akamaized.net/etvbharat/prod-images/768-512-9476954-thumbnail-3x2-ss.jpg)
ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕಾರ್ಯಚರಣೆ: ಮೂರು ಪ್ರಕರಣಗಳಿಂದ 1.01 ಕೋಟಿ ಮೌಲ್ಯದ ಚಿನ್ನ ವಶಕ್ಕೆ
ಈ ವೇಳೆ ಒಟ್ಟು ಮೂರು ಪ್ರಕಣಗಳು ಪತ್ತೆಯಾಗಿದ್ದು, ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ಪೇಸ್ಟ್ ರೂಪದ 86,24,954 ರೂಪಾಯಿ ಮೌಲ್ಯದ ಚಿನ್ನ ಹಾಗೂ 15,57,312 ರೂಪಾಯಿ ಮೌಲ್ಯದ ಗಟ್ಟಿ ಚಿನ್ನ ಜಪ್ತಿ ಮಾಡಲಾಗಿದ್ದು, ಒಟ್ಟು 1,01,82,266 ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.