ಕರ್ನಾಟಕ

karnataka

ETV Bharat / state

ಎಂಎಸ್ಐಎಲ್​​ ಮದ್ಯ ಮಾರಾಟ ಮಳಿಗೆ ತೆರೆಯದಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಬೇಕಾಗಿಲ್ಲ. ಇದರಿಂದ ಗ್ರಾಮದಲ್ಲಿನ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಟಿ.ಜಿ.ಮಂಜುನಾಥ ಹೇಳಿದ್ದಾರೆ.

Opposition to MSIL Liquor Store at Doddabellapura
ಎಂಎಸ್ಐಎಲ್​​ ಮದ್ಯ ಮಾರಾಟ ಮಳಿಗೆಗೆ ವಿರೋಧ

By

Published : Jun 8, 2020, 9:42 PM IST

ದೊಡ್ಡಬಳ್ಳಾಪುರ:ತಾಲೂಕಿನ ಮಧುರೆ ಹೋಬಳಿಯ ದೊಡ್ಡ ತುಮಕೂರು ಗ್ರಾಮದಲ್ಲಿ ಸರ್ಕಾರದ ವತಿಯಿಂದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯಲು ನಿರ್ಧರಿಸಿದ್ದು, ಇದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪಂಚಾಯತ್​ ಕಚೇರಿ ಮುಂದೆ ಪ್ರತಿಭಟಿಸಿದ ಗ್ರಾಮಸ್ಥರು
ದೊಡ್ಡ ತುಮಕೂರು ಪಂಚಾಯತ್​ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡ ಟಿ.ಜಿ.ಮಂಜುನಾಥ ಮಾತನಾಡಿ, ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಬೇಕಾಗಿಲ್ಲ. ಇದರಿಂದ ಗ್ರಾಮದಲ್ಲಿನ ಸ್ವಾಸ್ಥ್ಯ ಹಾಳಾಗುತ್ತದೆ. ಅಲ್ಲದೇ ಗ್ರಾಮದಲ್ಲಿ ಮದ್ಯ ಮಾರಾಟ ಮಳಿಗೆ ತೆಗೆಯುವುದು ಉತ್ತಮ ಬೆಳವಣಿಗೆಯಲ್ಲ. ಇದರಿಂದ ಕುಡುಕರ ಹಾವಳಿ ಹೆಚ್ಚಾಗಿ ಶಾಂತಿ ನೆಲೆಸಲು ಸಾಧ್ಯವಿರಲ್ಲ ಎಂದರು. ಗ್ರಾಮದ ಹಿರಿಯ ಮುಖಂಡರು, ರೈತ ಪರ ಹೋರಾಟಗಾರರು, ಮಹಿಳಾ ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಎಸ್​ಸಿ ಹಾಗೂ ಎಸ್​​ಟಿ ಸಮುದಾಯಗಳ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮದ ಎಲ್ಲಾ ಯುವಕರು, ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಾಲೂಕು ಪಂಚಾಯತ್​ ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯಗೆ ಮನವಿ ಸಲ್ಲಿಸಿದರು.

ABOUT THE AUTHOR

...view details