ಕರ್ನಾಟಕ

karnataka

ETV Bharat / state

ಚಿನ್ನದ ಬಿಸ್ಕತ್ ಕಳ್ಳಸಾಗಣೆ: 2 ಕೆಜಿ ಚಿನ್ನದೊಂದಿಗೆ ಸಿಕ್ಕಿಬಿದ್ದ ಪ್ರಯಾಣಿಕ - Directorate of Revenue Intelligence

ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

passenger-arrested-for-gold-smuggling-at-bengaluru-airport
ಚಿನ್ನದ ಬಿಸ್ಕತ್ ಕಳ್ಳಸಾಗಾಟ: 2.3 ಕೆಜಿ ಚಿನ್ನದೊಂದಿಗೆ ಸಿಕ್ಕಿಬಿದ್ದ ಪ್ರಯಾಣಿಕ

By

Published : Nov 24, 2022, 9:27 PM IST

ದೇವನಹಳ್ಳಿ: ವಿದೇಶದಿಂದ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು, ಆತನಿಂದ 2,398 ಗ್ರಾಂ ತೂಕದ ಚಿನ್ನ ವಶಕ್ಕೆ ಪಡೆದಿದ್ದಾರೆ. ನವೆಂಬರ್​ 16ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಂದಾಯ ಗುಪ್ತಚರ ನಿರ್ದೇಶನಾಲಯದ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದಿಳಿದ ಪ್ರಯಾಣಿಕನನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಆಗ ಭಾರಿ ಪ್ರಮಾಣದ ಚಿನ್ನ ಕಳ್ಳ ಸಾಗಾಣಿಕೆ ಬೆಳಕಿಗೆ ಬಂದಿದೆ.

ಚಿನ್ನ ಕಳ್ಳಸಾಗಾಟ

ಇದನ್ನೂ ಓದಿ:ಏರ್‌ಪೋರ್ಟ್​ನಲ್ಲಿ ಸೊಂಟಕ್ಕೆ ಸುತ್ತಿಕೊಂಡು ಸಾಗಿಸುತ್ತಿದ್ದ 32 ಕೋಟಿ ಮೌಲ್ಯದ 61 ಕೆಜಿ ಚಿನ್ನ ಜಪ್ತಿ

ವ್ಯಕ್ತಿ ಬಳಿ 15 ಚಿನ್ನದ ಬಿಸ್ಕತ್​, 2 ಚಿನ್ನದ ಕಟ್ ಪೀಸ್, 4 ಚಿನ್ನದ ಕಡ್ಡಿ ಪತ್ತೆಯಾಗಿದೆ. ಪ್ರಕರಣ ಸಂಬಂಧ ವ್ಯಕ್ತಿಯನ್ನು ಬಂಧಿಸಿ, 2,398 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರಲ್ಲಿ ನಕಲಿ ಚಿನ್ನ ಮಾರಾಟ ದಂಧೆ.. ತಾಮ್ರದ ನಾಣ್ಯವನ್ನೇ ಚಿನ್ನ ಎಂದು ನಂಬಬೇಡಿ!

ABOUT THE AUTHOR

...view details