ದೊಡ್ಡಬಳ್ಳಾಪುರ: ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಸರಗಳ್ಳನನ್ನು ಸ್ಥಳೀಯರೇ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದ ಜನ - ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ
ದೊಡ್ಡಬಳ್ಳಾಪುರದಲ್ಲಿ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ.
ತಿಪ್ಪೂರು ಮೂಲದ ಕೆಂಪರಾಜು (28) ಬಂಧಿತ ಆರೋಪಿ. ಯಲಹಂಕದ ಹೊಸಹುಡ್ಯದಲ್ಲಿ ವಾಸವಿರುವ ಈತ ನಿನ್ನೆ ಸಂಜೆ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಶ್ರೀನಗರದ ಮಂಜುಳಾ ಎಂಬುವರ 30 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಓಡಿ ಹೋಗಿದ್ದಾನೆ. ಮಹಿಳೆ ಕೂಗಿಕೊಳ್ಳುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು, ಕಳ್ಳನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಕೆಂಪರಾಜು ರೈಲ್ವೆ ನಿಲ್ದಾಣದ ಫುಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ:36 ಕೇಸ್ಗಳಲ್ಲಿ ಭಾಗಿ.. ಮೂರು ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ ಇರಾನಿ ಗ್ಯಾಂಗ್ ಸದಸ್ಯ