ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ):ಒಳ ಉಡುಪಿನಲ್ಲಿ ಮರೆಮಾಚಿ ಚಿನ್ನದ ಗಟ್ಟಿಯನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನೋರ್ವ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ 47.31 ಲಕ್ಷ ರೂ. ಮೌಲ್ಯದ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ.
ಮೇ 8ರಂದು ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಡಿಆರ್ಐ ಅಧಿಕಾರಿಗಳು ತಪಾಸಣೆ ನಡೆಸಿದಾಗ ಕಳ್ಳ ಸಾಗಾಣಿಕೆ ಬೆಳಕಿಗೆ ಬಂದಿದೆ. ಬಂಧಿತ ವ್ಯಕ್ತಿಯು ತನ್ನ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನದ ಗಟ್ಟಿ ಸಾಗಿಸುತ್ತಿದ್ದ. ಆರೋಪಿಯಿಂದ 918.01 ಗ್ರಾಂ ತೂಕದ 47,31,427 ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನ ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.