ಬೆಂಗಳೂರು:ಪ್ಲಾಸ್ಟಿಕ್ ಸಂಗ್ರಹಿಸಿ,ಮರುಬಳಕೆಗೆ ಅನುವು ಮಾಡಿಕೊಡುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನ ಪ್ಲಾಸ್ಟಿಕ್ ಮುಕ್ತವಾಗಿಸಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಪ್ಲಾಸ್ಟಿಕ್ ಸಂಗ್ರಹಿಸಿ,ಮರುಬಳಕೆಗೆ ಅನುವು ಮಾಡಿಕೊಡುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸೆಪ್ಟೆಂಬರ್ 11ರಿಂದ ಅಕ್ಟೋಬರ್ 27ರವರೆಗೆ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಆಂದೋಲನದ “ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದ್ದು,ಅದರಿಂದ ಸಂಗ್ರಹವಾದ ಪ್ಲಾಸ್ಟಿಕ್ನ್ನ ಘನತ್ಯಾಜ್ಯ ಘಟಕ್ಕೆ ಕೊಂಡೊಯ್ಯುವ ವಾಹನಕ್ಕೆ ಚಾಲನೆ ನೀಡಿದ್ರು.
ಬಳಿಕ ಮಾತನಾಡಿದ ಅವರು, ಅಕ್ಟೋಬರ್ 2ರಂದು ಶ್ರಮದಾನ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಗಿತ್ತು. ಇದರ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 105 ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಂದ ಸಂಗ್ರಹಿಸಲಾದ 2.5 ಟನ್‌ಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಬಾಶೆಟ್ಟಿಹಳ್ಳಿಯ ಘನತ್ಯಾಜ್ಯ ಘಟಕದಲ್ಲಿ ಸಂಸ್ಕರಿಸಿ,ಮರುಬಳಕೆಗಾಗಿ ರೀಸೈಕಲ್ ಯೂನಿಟ್‌ಗೆ ಕಳುಹಿಸಲಾಗುತ್ತಿದೆ. ಇದೇ ರೀತಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಇಲ್ಲದಂತೆ ಮಾಡುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕಾಗಿದೆ. ಎಲ್ಲಾ ಜನರು ಇದಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದ್ರು.