ದೊಡ್ಡಬಳ್ಳಾಪುರ : ತಾಲೂಕಿನ ಚನ್ನಾಪುರದಲ್ಲಿ ವಿತರಿಸಲಾದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಚನ್ನಾಪುರದ ಚಂದ್ರು ಎಂಬುವವರು ಪಡಿತರ ಅಕ್ಕಿಯನ್ನು ತಂದಿದ್ದು, ತಂದ ಅಕ್ಕಿಯನ್ನು ನೀರಿನಲ್ಲಿ ಹಾಕಿದಾಗ ತೇಲುತ್ತಿರುವುದು ಕಂಡು ಬಂದಿದೆ. ಅಕ್ಕಿಕಾಳುಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಪ್ಲಾಸ್ಟಿಕ್ ಅಕ್ಕಿಯೆಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಪಡಿತರ ಚೀಟಿಗೆ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ - ಈಟಿವಿ ಭಾರತ ಕನ್ನಡ
ದೊಡ್ಡಬಳ್ಳಾಪುರ ತಾಲೂಕಿನ ಚನ್ನಾಪುರದ ಗ್ರಾಮದಲ್ಲಿ ವಿತರಿಸಿದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ಪಡಿತರ ಚೀಟಿಗೆ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ
ಚನ್ನಾಪುರ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವುದಾಗಿ ಗ್ರಾಮಸ್ಥರು ಹೇಳಿದ್ದು, ಪ್ಲಾಸ್ಟಿಕ್ ಅಕ್ಕಿ ವಿತರಿಸಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಆರೋಪ