ಕರ್ನಾಟಕ

karnataka

ETV Bharat / state

ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ: 7 ಲಕ್ಷ ರೂ. ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಅಕ್ರಮವಾಗಿ ಹಣ, ಮದ್ಯ ಸೇರಿದಂತೆ ಇತರ ವಸ್ತುಗಳ ಸಾಗಣೆ ನಿರ್ಬಂಧಿಸಲಾಗಿದೆ. ಇಂದು ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ

By

Published : Mar 30, 2019, 2:31 PM IST

ದೊಡ್ಡಬಳ್ಳಾಪುರ : ಹಿಂದೂಪುರ-ಬೆಂಗಳೂರು ಹೆದ್ದಾರಿ ಮಾರ್ಗದ ಗುಂಜೂರು ಚೆಕ್ ಪೋಸ್ಟ್​ನಲ್ಲಿ ತಪಾಸಣೆ ನಡೆಸುವ ವೇಳೆ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆತನಿಂದ 7 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ.

ಸೇತು ಮಾಧವ್ ಬಂಧಿತ ಆರೋಪಿ. ಈತ ಬೆಂಗಳೂರು ಮೂಲದವನಾಗಿದ್ದಾನೆ. ಗೌರಿಬಿದನೂರು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಈತ ಪ್ರಯಾಣ ಮಾಡುತ್ತಿದ್ದ. ಈ ವೇಳೆ, ತಪಾಸಣೆ ನಡೆಸಿದ ಪೊಲೀಸರಿಗೆ 7 ಲಕ್ಷ ಹಣ ಸಿಕ್ಕಿದೆ. ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ಇಲ್ಲದೇ ಇದ್ದುದರಿಂದ ಸೇತುಮಾಧವ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ.

ನಿನ್ನೆ ಇದೇ ಚೆಕ್​ಪೋಸ್ಟ್​ನಲ್ಲಿ ಆಂಧ್ರಪ್ರದೇಶದ ಹಿಂದೂಪುರದಿಂದ ಸಾಗಿಸುತ್ತಿದ್ದ ವೇಳೆ1.3 ಕೆ.ಜಿ. ಗಾಂಜಾ ಸಿಬ್ಬಂದಿ ತಪಾಸಣೆ ವೇಳೆ ದೊರೆತ್ತಿತ್ತು. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details