ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ದ್ವಿಚಕ್ರ ವಾಹನ ಕಳ್ಳರ ಬಂಧನ: ಎರಡು ವಾಹನ ವಶ
ರಾಜರಾಜೇಶ್ವರಿ ನಗರ ಪೊಲೀಸರು ನಗರದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Police arrested bike thieves
ಬಿಶ್ವಜೀತ್ ವೆಂಡಲ್ (25), ಜಯದೇವ್ (20) ಬಂಧಿತ ಆರೋಪಿಗಳು. ಮಾ.17ರಂದು ಮಾರಪ್ಪ ಲೇಔಟ್ನ ಮನೆಯೊಂದರ ಮುಂದೆ ನಿಲ್ಲಿಸಿದ್ದ ಎರಡು ವಾಹನಗಳು ಕಳ್ಳತನವಾಗಿದ್ದವು. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 1.23 ಲಕ್ಷ ರೂ. ಮೌಲ್ಯದ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.