ಹೊಸಕೋಟೆ: ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಕೆರೆ ಬಳಿ ನಡೆದಿದೆ.
ಅಕ್ರಮವಾಗಿ ರಕ್ತಚಂದನ ಸಾಗಾಟ: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು - Police firing on accused
ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಕೆರೆ ಬಳಿ ನಡೆದಿದೆ.
ಕಟ್ಟಿಗೇನಹಳ್ಳಿ ಸಮೀಪ ರಕ್ತಚಂದನ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ಡಿವೈಎಸ್ಪಿ ಸಕ್ರಿ ನೇತೃತ್ವದ ತಂಡ ಆರೋಪಿಗಳನ್ನು ಹಿಡಿಯಲು ಮುಂದಾಗಿತ್ತು. ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಡಿವೈಎಸ್ಪಿ ಸಕ್ರಿ ಆತ್ಮರಕ್ಷಣೆಗಾಗಿ ಆರೋಪಿ ಜಾವಿದ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಇಮ್ರಾನ್ ಎಂಬಾತನನ್ನ ವಶಕ್ಕೆ ಪಡೆಯಲಾಗಿದೆ.
ಬಂಧಿತರಿಂದ ಸುಮಾರು 800 ಕೆಜಿ ರಕ್ತಚಂದನ, ಸ್ಕಾರ್ಪಿಯೋ ವಾಹನ ಜಪ್ತಿ ಮಾಡಲಾಗಿದ್ದು, ಗಾಯಗೊಂಡ ಆರೋಪಿಯನ್ನ ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಆಸ್ಪತ್ರೆಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.