ಆನೇಕಲ್:ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರಿಗೆ ರಾಜ್ಯದ ಮೂಲೆಮೂಲೆಯಿಂದ ಜನರು ನೆರವಿನ ಹಸ್ತ ಚಾಚುತ್ತಿದ್ದಾರೆ. ಈಗ ಜೈಲಿನಲ್ಲಿರುವ ಕೈದಿಗಳೂ ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದು, 10 ಲಕ್ಷ ರೂ.ಗಳನ್ನು ಸಿಎಂ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.
ನೆರೆ ಸಂತ್ರಸ್ತರಿಗೆ ಮಿಡಿದ ಕೈದಿಗಳ ಮನ.. ಬಾಡೂಟ ಬಿಟ್ಟು 10 ಲಕ್ಷ ನೆರವು ನೀಡಲು ನಿರ್ಧಾರ! - ಆನೇಕಲ್
ಕೈದಿಗಳೂ ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದು, 10 ಲಕ್ಷ ರೂ.ಗಳನ್ನು ಸಿಎಂ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.
ಮಾಂಸಹಾರ ತ್ಯಜಿಸಿ 10 ಲಕ್ಷ ನೆರವು ನೀಡಲು ಕೈದಿಗಳ ನಿರ್ಧಾರ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳು ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿರುವುದು ತಿಳಿದು ಮರುಗಿದ್ದಾರೆ. ಹೀಗಾಗಿ ಜೈಲಿನಲ್ಲಿ ನೀಡುತ್ತಿದ್ದ ಮಾಂಸಹಾರ ತ್ಯಜಿಸಲು ನಿರ್ಧರಿಸಿದ್ದಾರೆ.
ಜೈಲಿನಲ್ಲಿ ಪ್ರತಿ ಶುಕ್ರವಾರ ಮಾಂಸಾಹಾರ ನೀಡಲಾಗುತ್ತದ್ದು, ಅದರಲ್ಲಿ ನಾಲ್ಕು ವಾರದ ಮಾಂಸದ ಊಟವನ್ನು ಸೇವಿಸದೆ ಮಾಂಸಾಹಾರಕ್ಕಾಗಿ ಖರ್ಚಾಗುವ ಸುಮಾರು 10 ಲಕ್ಷ ರೂಪಾಯಿ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೋರಿದ್ದಾರೆ.