ಕರ್ನಾಟಕ

karnataka

ETV Bharat / state

ನಾಳೆ ದೇವನಹಳ್ಳಿ ಪುರಸಭೆ ಮತಎಣಿಕೆ: ನಿಷೇಧಾಜ್ಞೆ ಜಾರಿ - undefined

ನಾಳೆ ದೇವನಹಳ್ಳಿ ಪುರಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ದೇವನಹಳ್ಳಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೇವನಹಳ್ಳಿ, ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ

By

Published : Jun 2, 2019, 7:25 PM IST

ನೆಲಮಂಗಲ:ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆಗೆ ನಡೆದ ಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

ದೇವನಹಳ್ಳಿ, ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ

ನೆಲಮಂಗಲದ ಜೂನಿಯರ್ ಕಾಲೇಜು ಮತ್ತು ದೇವನಹಳ್ಳಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಮತಎಣಿಕೆ ಕಾರ್ಯ ನಡೆಯಲಿದೆ.

ನಾಳೆ ಬೆಳಗ್ಗೆ6.00 ಗಂಟೆಯಿಂದ ಮಂಗಳವಾರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಈ ಸಮಯದಲ್ಲಿ ಮೆರವಣಿಗೆ, ಗುಂಪು ಗುಂಪಾಗಿ ಸೇರುವಿಕೆ, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.

For All Latest Updates

TAGGED:

ABOUT THE AUTHOR

...view details