ಕರ್ನಾಟಕ

karnataka

ETV Bharat / state

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ; ಮಾದನಾಯಕನಹಳ್ಳಿ ಪೊಲೀಸರಿಂದ ಆರೋಪಿಗಳ ಬಂಧನ - Madanayakanahalli Police Station

ನೆಲಮಂಗಲದ ಸಮೀಪದ ಮಾಗಡಿ ರಸ್ತೆಯಲ್ಲಿನ‌ ಚಿಕ್ಕಗೊಲ್ಲರ ಹಟ್ಟಿಯಲ್ಲಿ ಮನೆಯನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

Madanayakanahalli Police Station
ಮಾದನಾಯಕನಹಳ್ಳಿ ಪೊಲೀಸ್​ ಠಾಣೆ

By

Published : Dec 19, 2022, 3:58 PM IST

Updated : Dec 19, 2022, 4:29 PM IST

ನೆಲಮಂಗಲ :ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಸೆರೆ ಹಿಡಿದಿರುವ ಘಟನೆ ನೆಲಮಂಗಲದ ಸಮೀಪ ನಡೆದಿದೆ. ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ನೆಲಮಂಗಲದ ಸಮೀಪದ ಮಾಗಡಿ ರಸ್ತೆಯಲ್ಲಿನ‌ ಚಿಕ್ಕಗೊಲ್ಲರ ಹಟ್ಟಿಯಲ್ಲಿ ಮನೆಯನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ವೇಳೆ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಗಿರೀಶ್ ಹಾಗೂ ಸುಮಾ ಬಂಧಿತ ಆರೋಪಿಗಳಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ..

Last Updated : Dec 19, 2022, 4:29 PM IST

ABOUT THE AUTHOR

...view details