ದೊಡ್ಡಬಳ್ಳಾಪುರ: ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿರುವ ಮಾಹಿತಿ ಮೇರೆಗೆ ಹಸುಗಳನ್ನು ಸಂರಕ್ಷಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ - undefined
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
![ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ](https://etvbharatimages.akamaized.net/etvbharat/images/768-512-2907778-thumbnail-3x2-cowjpg.jpg)
ದೊಡ್ಡಬಳ್ಳಾಪುರ ನಗರದ ಜಾಲಪ್ಪ ಕಾಲೇಜು ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಮಾಹಿತಿಯನ್ನು ನಗರದ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಾಹಿತಿಯ ಮೇರೆಗೆ ಪೊಲೀಸರು ಹಸುಗಳ ರಕ್ಷಣೆ ಮಾಡಿದ್ದಾರೆ.
ದಾಸ್‍ಪೇಟೆಯಿಂದ ನಗರದ ಇಸ್ಲಾಂಪುರದ ಕಸಾಯಿಖಾನೆಗೆ ಅಕ್ರಮವಾಗಿ 2 ಹಸು ಹಾಗೂ 4 ಕರುಗಳನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸು ಮತ್ತು ಕರುಗಳು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕನನ್ನು ವಶಕ್ಕೆ ಪಡೆದ ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.