ಆನೇಕಲ್: ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.
ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ - ಬೆಂಗಳೂರಿನ ಆನೇಕಲ್ನಲ್ಲಿ ಪಿಡಿಒ ವಿರುದ್ಧ ಪ್ರತಿಭಟನೆ
ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ
ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ
ತಾಲೂಕಿನಲ್ಲಿ ಸುಳ್ಳು ಬಿಲ್ಗಳನ್ನು ಸೃಷ್ಟಿಸುತ್ತಿರುವ ಪಿಡಿಒ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ದಲಿತ, ಬಡ ಜನರ ವಿರೋಧಿಯಾಗಿರುವ ರವಿ ಅವರನ್ನು ಕೂಡಲೇ ಅಮಾನತು ಮಾಡಿ ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಕೃಷ್ಣಪ್ಪ ಆನೇಕಲ್ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.