ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರಿಗೆ ಸಿಗದ ಪರಿಹಾರ: ಮೋದಿ, ಬಿಎಸ್​ವೈ ವಿರುದ್ಧ ಪ್ರತಿಭಟನೆ - ಜನರ ಕಷ್ಟ ಅರಿಯ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿನ ಕೃಷ್ಣರಾಜಪುರ ರೈತರು ಮತ್ತು ಸಂತೆ ಮಕ್ಕಳು ವ್ಯಾಪಾರಿಗಳು ಪಿಎಂ ಮೋದಿ, ಸಿಎಂ ಬಿಎಸ್​ವೈ, ಅನರ್ಹ ಶಾಸಕ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪಿಎಂ ಮೋದಿ, ಸಿಎಂ ಬಿಎಸ್​ವೈ, ಅನರ್ಹ ಶಾಸಕ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ

By

Published : Sep 24, 2019, 10:06 PM IST

ಬೆಂಗಳೂರು:ರಾಜ್ಯದಲ್ಲಿ ಪ್ರವಾಹ ಉಂಟಾಗಿ ಜನರು ತೊಂದರೆ ಅನುಭವಿಸುತ್ತಿದ್ದು ಜನರ ಕಷ್ಟ ಅರಿಯ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುದುರೆ ವ್ಯಾಪಾರದ ಮೂಲಕ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದು ಇದರ ವಿರುದ್ಧ ಬೆಂಗಳೂರಿನ ಕೃಷ್ಣರಾಜಪುರ ರೈತರು ಮತ್ತು ಸಂತೆ ಮಕ್ಕಳು ವ್ಯಾಪಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಲೆ ಶ್ರೀನಿವಾಸ್ ನೇತೃತ್ವದಲ್ಲಿ ಗೊಣಿ ಚೀಲ, ಗಾಂಧಿ ಟೋಪಿ ಧರಿಸಿ ಬಿಜೆಪಿ ಕಚೇರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಕೆ.ಆರ್.ಪುರ ಕಟ್ಟೆ ವಿನಾಯಕ ಸ್ವಾಮಿ ದೇವಾಲಯ ಬಳಿಯ ಡಾ. ರಾಜ್ ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನೂರಾರು ರೈತರು ಹಾಗೂ ವ್ಯಾಪಾರಿಗಳು ಕೆ.ಆರ್ ಪುರ ಸಂತೆ ಯಿಂದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತೆರಳಿ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಲಿಸುವುದಾಗಿ ರೈತರು ಮತ್ತು ಸಂತೆ ಮಕ್ಕಳು ಒಕ್ಕೂಟದ ರಾಜ್ಯಾದ್ಯಕ್ಷ ಎಲೆ ಶ್ರೀನಿವಾಸ್ ತಿಳಿಸಿದ್ದಾರೆ. ಸಂತೆ ಮಕ್ಕಳು ಒಕ್ಕೂಟದ ರಾಜ್ಯಾದ್ಯಕ್ಷ ಎಲೆ ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಭೀಕರ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವವರ ಜನಸಾಮಾನ್ಯರ ಕಷ್ಟಕ್ಕೆ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ. ಇಲ್ಲಿಯವರೆಗೆ ಒಂದು ಬಿಡಿಗಾಸು ಪರಿಹಾರ ಘೋಷಿಸದೆ ನೆರೆ ಸಂತ್ರಸ್ತರನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪಿಎಂ ಮೋದಿ, ಸಿಎಂ ಬಿಎಸ್​ವೈ, ಅನರ್ಹ ಶಾಸಕ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ

ಮತ್ತೊಂದೆಡೆ ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಬಿತ್ತನೆಗೆ ನೀರಿನ ಸೌಲಭ್ಯವಿಲ್ಲದೆ ಜನ ಕಂಗಾಲಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಜಿಲ್ಲೆಗಳನ್ನು ಇನ್ನೂ ಸಹ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿ, ಪರಿಹಾರ ಕಾರ್ಯಾಚರಣೆ ಕೈಗೊಂಡಿಲ್ಲ. ಸರ್ಕಾರ ಇನ್ನೂ ನಿದ್ರಾವಸ್ಥೆಯಲ್ಲಿದೆ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details