ದೊಡ್ಡಬಳ್ಳಾಪುರ : ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆಗಾಗಿ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಸೇವಾ ಭದ್ರತೆಗಾಗಿ ಒತ್ತಾಯ: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಪ್ರತಿಭಟನೆ - ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ
ಕಳೆದ ಹದಿನಾರು ವರ್ಷಗಳಿಂದ ನಾವು ಸೇವಾ ಭದ್ರತೆ, ಸಮಾನ ವೇತನ ಇಲ್ಲದೆ ಕೆಲಸ ಮಾಡುತ್ತಿದ್ದು, ಸರ್ವೋಚ್ಛ ನ್ಯಾಯಾಲಯದ ಆದೇಶವಿದ್ದರೂ ಆಳುವ ಸರ್ಕಾರಗಳ ಮುಂದೆ ನಮ್ಮ ನ್ಯಾಯಯುತ ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದೇವೆ ಎಂದರು.
ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಪ್ರತಿಭಟನೆ.
ಜಿಲ್ಲೆಯ ಸಾರ್ವಜನಿಕ ಆಸ್ಫತ್ರೆಯ ನೌಕರರು, ಭಾರತೀಯ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘ, ಭಾರತೀಯ ಮಜ್ದೂರ್ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಿದರು.
ಆದ್ರೆ ನಮ್ಮ ಕೂಗನ್ನು ಯಾವುದೇ ಸರ್ಕಾರಗಳು ಪರಿಗಣಿಸುತ್ತಿಲ್ಲ. ಹಾಗಾಗಿ, ಮೇ 23 ರ ವರೆಗೂ ನಮ್ಮ ಈ ಹೋರಾಟ ಇದೇ ರೀತಿ ಮುಂದುವರೆಯುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿವಹಿಸುತ್ತಿರುವ ಡಾ.ದತ್ತುಸಿಂಗ್, ಶ್ರವಣದೋಶ ತಂತ್ರಜ್ಞರಾದ ದಿನೇಶ್, ಸೂಪರ್‌ವೈಸರ್ ದಿನೇಶ್ ಆಶಾರಾಣಿ ಮುಂತಾದವರು ಉಪಸ್ಥಿತರಿದ್ದರು.