ದೊಡ್ಡಬಳ್ಳಾಪುರ: ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಮಾಡಲಾಗಿದ್ದು, ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೀದಿಗಿಳಿದಿವೆ.
ಬಂದ್ ಬೆಂಬಲಿಸುವಂತೆ ಕೈ ಮುಗಿದು ಮನವಿ ಮಾಡಿದ ಕನ್ನಡಪರ ಹೋರಾಟಗಾರರು ಬಂದ್ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಸ್ತಬ್ಧವಾಗಿದ್ದು, ದೊಡ್ಡಬಳ್ಳಾಪುರ ಬಸ್ ನಿಲ್ದಾಣ ಜನರಿಲ್ಲದೆ ಬೀಕೋ ಎನ್ನುತ್ತಿದೆ. ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿ ವ್ಯಾಪಾರಿಗಳು ಬಂದ್ಗೆ ಬೆಂಬಲ ನೀಡಿದ್ದಾರೆ. ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಪ್ರಯಾಣಿಕರ ಸೇವೆಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಸಜ್ಜಾಗಿವೆ.
ಬಂದ್ಗೆ ಬೆಂಬಲ ನೀಡುವಂತೆ ಚಾಲಕ ಮತ್ತು ಕಂಡಕ್ಟರ್ಗೆ ಕೈ ಮುಗಿದು ಮನವಿ ಮಾಡಿದ ಕನ್ನಡ ಪರ ಹೋರಾಟಗಾರರು ನೀವು ಸಹ ರೈತರ ಮಕ್ಕಳು. ನಿಮಗೂ ತೊಂದರೆಯಾದಾಗ ನಾವು ಹೋರಾಟ ಮಾಡಲಿದ್ದೇವೆ ಎಂದು ಮನವಿ ಮಾಡಿದರು. ಅನಂತರ ಸಿದ್ಧಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ರೈತರು ಮತ್ತು ಕನ್ನಡಪರ ಹೋರಾಟಗಾರರು ಎಪಿಎಂಸಿ ಮತ್ತು ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಱಲಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.