ಕರ್ನಾಟಕ

karnataka

ETV Bharat / state

ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಜೊತೆ ಫಲಾನುಭವಿಗಳಿಗೆ ಸೌಲಭ್ಯ, ಸವಲತ್ತು ನೀಡಿ: ಸಂಸದ ಬಚ್ಚೇಗೌಡ - ಹೊಸಕೋಟೆ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರೈತರಿಗೆ, ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ವೃದ್ಧರಿಗೆ ಹಲವಾರು ಸೌಲಭ್ಯಗಳು ನೀಡಲಾಗುತ್ತಿದ್ದು, ಅದರ ಬಗ್ಗೆ ಜನರಿಗೆ ಮಾಹಿತಿ ನೀಡಿ, ಸೌಲಭ್ಯಗಳನ್ನು ಜನತೆಯ ಮನೆ ಬಾಗಿಲಿಗೆ ಕೊಂಡೊಯ್ಯುವ ಕೆಲಸ ಎಲ್ಲಾ ಸರ್ಕಾರಿ ಅಧಿಕಾರಿಗಳು ಮಾಡಲೇಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ಸಂಸದ ಬಿ ಎನ್ ಬಚ್ಚೇಗೌಡ

By

Published : Sep 1, 2019, 9:11 AM IST

Updated : Sep 1, 2019, 11:34 AM IST

ಹೊಸಕೋಟೆ:ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರೈತರಿಗೆ, ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ವೃದ್ಧರಿಗೆ ಹಲವಾರು ಸೌಲಭ್ಯಗಳು ನೀಡಲಾಗುತ್ತಿದ್ದು, ಅದರ ಬಗ್ಗೆ ಜನರಿಗೆ ಮಾಹಿತಿ ನೀಡಿ, ಸೌಲಭ್ಯಗಳನ್ನು ಜನತೆಯ ಮನೆ ಬಾಗಿಲಿಗೆ ಕೊಂಡೊಯ್ಯುವ ಕೆಲಸ ಎಲ್ಲಾ ಸರ್ಕಾರಿ ಅಧಿಕಾರಿಗಳು ಮಾಡಲೇಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಜೊತೆ ಫಲಾನುಭವಿಗಳಿಗೆ ಸೌಲಭ್ಯ, ಸವಲತ್ತು ನೀಡಿ: ಸಂಸದ ಬಚ್ಚೇಗೌಡ
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚಿಕ್ಕಬಳ್ಳಾಪುರ ಸಂಸದ‌ ಬಚ್ಚೇಗೌಡ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಲಾಖೆಯ ಮಾಹಿತಿ ಪಡೆದ ಅವರು, ಕೆಲ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಜನತೆಗೆ ಸಂಪೂರ್ಣವಾಗಿ ಚುರುಕಾಗಿ ತಲುಪಿಸುವಲ್ಲಿ ಹಿನ್ನಡೆಯಾಗಿದೆ. ಸಮಸ್ಯೆಯನ್ನು ಸರಿಪಡಿಸಲು ಮುಂದಾಗುವಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಖುದ್ದು ಮಾತನಾಡುವುದಾಗಿ ತಿಳಿಸಿದರು.

ಹಾಗೂ ಕಳೆದ 2017 - 18ನೇ ಸಾಲಿನಲ್ಲಿ ಮಳೆಯ ಪ್ರಮಾಣದಲ್ಲಿ ಶೇ. 17ರಷ್ಟು ಕಡಿಮೆಯಾಗಿದ್ದು, ರೈತರ ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆಗಳಾಗಿದೆ. ಇದೇ ಸಂದರ್ಭದಲ್ಲಿ ಹೊಸಕೋಟೆ ತಾಲೂಕನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಲಾಗಿದ್ದು, 2019 - 20 ರಲ್ಲೂ ಈಗಿನವರೆಗೆ ಸುರಿದ ಮಳೆಯ ಪ್ರಮಾಣದಲ್ಲಿ ಶೇ. 14ರಷ್ಟು ಕಡಿಮೆಯಾಗಿದೆ. ಇದರಿಂದ ತಾಲೂಕಿನಲ್ಲಿ ರಾಗಿ ಬೆಳೆ ಕಳೆದ ಸಾಲಿಗಿಂದ ಶೇ. 35ರಷ್ಟು ಕಡಿಮೆಯಾಗಿದೆ. ಜಾನುವಾರುಗಳ ಮೇವಿನ ಬಗ್ಗೆ ಮಾಹಿತಿ ಪಡೆದ ಅವರು, ತಾಲೂಕಿನ ಗಂಗಾಪುರದಲ್ಲಿ ಗೋಶಾಲೆಯನ್ನು ತೆರೆಯಲಾಗಿದೆ. ಕನಿಷ್ಠ 12 ವಾರಗಳಿಗಾಗುವಷ್ಟು ಮೇವನ್ನು ಸಂಗ್ರಹಿಸಿ ಇಡಲಾಗಿದ್ದು, ಸೂಕ್ತ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲಾಗಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಅಹವಾಲು ಸ್ವೀಕರಿಸಿದ ಅವರು, ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ತಾಲೂಕಿನ ಕಲ್ಲಹಳ್ಳಿ ಬಳಿ 10 ಎಕರೆ ನಿವೇಶನವನ್ನು ಕಳೆದ ನಾಲ್ಕು ವರ್ಷಗಳ ಹಿಂದೆ ನೀಡಲಾಗಿದೆ. ಇಲ್ಲಿಯವರೆಗೂ ಯಾವುದೇ ಪ್ರಗತಿ ಕಾಣದೆ ಕಸವನ್ನೆಲ್ಲಾ ತಾಲೂಕಿನ ವಿವಿಧ ಗ್ರಾಮಗಳ ಅಂಚಿನಲ್ಲಿ ರಾತ್ರೋರಾತ್ರಿ ಸುರಿದು ಹೋಗಲಾಗುತ್ತಿದೆ. ಇದರಿಂದ ಗ್ರಾಮಸ್ಥರನ್ನು ರೋಗಗ್ರಸ್ತರನ್ನಾಗಿ ಮಾಡಲಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಿ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವಿ.ಪ್ರಸಾದ್ ಮನವಿ ಮಾಡಿದರು.


Last Updated : Sep 1, 2019, 11:34 AM IST

ABOUT THE AUTHOR

...view details