ಕರ್ನಾಟಕ

karnataka

ETV Bharat / state

ಕೋವಿಡ್-19 ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಪಿಎಸ್​ಐ ದರ್ಪ ಆರೋಪ - ಕೋವಿಡ್-19 ಸಾಂಕ್ರಾಮಿಕ ರೋಗ

ಕರ್ತವ್ಯ ನಿರತನಾಗಿದ್ದ ಸರ್ಕಾರಿ ಸಿಬ್ಬಂದಿ ಮೇಲೆ ದೇವನಹಳ್ಳಿ ಪಿಎಸ್​ಐ ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ ದರ್ಪ ಮೆರೆದಿರುವ ಆರೋಪ ಕೇಳಿ ಬಂದಿದೆ.

PSI misdemeanor on Covid-19 duty-bound staff
ಪಿಎಸ್​ಐ ದರ್ಪ

By

Published : Apr 8, 2020, 5:18 PM IST

ದೇವನಹಳ್ಳಿ :ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕರ್ತವ್ಯ ನಿರತನಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಮೇಲೆ ದೇವನಹಳ್ಳಿ ಪಿಎಸ್​ಐ ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ ದರ್ಪ ಮೆರೆದಿದ್ದಾರೆ ಎನ್ನಲಾಗಿದೆ.

ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಪಿಎಸ್​ಐ ದರ್ಪ ಆರೋಪ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಎಂ.ಎ ಅಶೋಕ್ ಕೋವಿಡ್-19 ರೋಗ ನಿಯಂತ್ರಣಕ್ಕಾಗಿ ಕರ್ತವ್ಯ ನಿರತನಾಗಿದ್ದರು. ನಿನ್ನೆ ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ಪಟ್ಟಣದ ಪರಿವೀಕ್ಷಣಾ ಮಂದಿರದಿಂದ ಚನ್ನರಾಯಪಟ್ಟಣಕ್ಕೆ ಕರ್ತವ್ಯಕ್ಕೆ ತೆರಳುವ ವೇಳೆ ದೇವನಹಳ್ಳಿ ಹಳೆ ಬಸ್ ನಿಲ್ದಾಣದ ಬಳಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದ್ದಾರೆ. ಕೋವಿಡ್ -19 ಕರ್ತವ್ಯಕ್ಕೆ ನಿರತನಾಗಿದ್ದರ ಬಗ್ಗೆ ಗುರುತಿನ ಚೀಟಿ ತೋರಿಸಿದ್ದರೂ, ಪಿಎಸ್​ಐ ನಾಗರಾಜ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ ಲಾಠಿಯಿಂದ ಆತನಿಗೆ ಹೊಡೆದಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಪೊಲೀಸರು, ಸರ್ಕಾರಿ ಇಲಾಖೆಯ ಸಿಬ್ಬಂದಿಯನ್ನ ಪೊಲೀಸ್ ಸ್ಟೇಷನ್​ಗೆ ಕರೆದೊಯ್ದು ಬಲವಂತದಿಂದ ಮೊಬೈಲ್ ಕಿತ್ತುಕೊಂಡು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದ ಚಿತ್ರಗಳನ್ನ ಡಿಲೀಟ್ ಮಾಡಿದ್ದಾರೆಂದು ಅಶೋಕ್ ಆರೋಪ ಮಾಡಿದ್ದಾರೆ.

ದೂರು ಪ್ರತಿ

ದರ್ಪ ಮೆರೆದ ಪಿಎಸ್​ಐ ನಾಗರಾಜ್ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳ ಸಂಘಕ್ಕೆ ದೂರು ನೀಡಿದ್ದಾರೆ.

ABOUT THE AUTHOR

...view details