ದೇವನಹಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳು ಐಶ್ವರ್ಯಾ ಮತ್ತು ಅಮರ್ತ್ಯ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಿ ನವಜೋಡಿಗಳಿಗೆ ಶುಭಹಾರೈಸಿದರು.
ಡಿಕೆಶಿ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಹುಲ್ - ಪ್ರಿಯಾಂಕಾ - ದೇವನಹಳ್ಳಿ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಗಳು ಐಶ್ವರ್ಯಾ ಮತ್ತು ಅಮರ್ತ್ಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿದ್ದರು.
![ಡಿಕೆಶಿ ಮಗಳ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಹುಲ್ - ಪ್ರಿಯಾಂಕಾ bengaluru](https://etvbharatimages.akamaized.net/etvbharat/prod-images/768-512-10672757-655-10672757-1613623437549.jpg)
ದೇವನಹಳ್ಳಿಯ ಖಾಸಗಿ ರೆಸಾರ್ಟ್ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಸಚಿವರಾದ ಆರ್. ಅಶೋಕ್, ಭೈರತಿ ಬಸವರಾಜ್, ಲಕ್ಷ್ಮಣ್ ಸವದಿ,ಶಿವರಾಮ್ ಹೆಬ್ಬಾರ್, ಆರ್. ಶಂಕರ್,ರಮೇಶ್ ಜಾರಕಿಹೊಳಿ,ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವಚೆಲುವರಾಯಸ್ವಾಮಿ, ಸಂಸದೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಸದಾನಂದ ಗೌಡ, ಶಾಸಕರಾದ ಕೃಷ್ಣ ಬೈರೇಗೌಡ, ಹ್ಯಾರಿಸ್, ಶಾಸಕ ಮಹೇಶ್ ಕುಮಟಳ್ಳಿ, ಈಶ್ವರ್ ಖಂಡ್ರೆ ಸೇರಿದಂತೆ ಅನೇಕ ಹಲವು ಗಣ್ಯರು ಆಗಮಿಸಿ ವಧು-ವರರಿಗೆ ಶುಭಕೋರಿದರು.