ದೇವನಹಳ್ಳಿ: ಇಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಆಗಮಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್, ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.ರಾಮ್‌ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಕಾಲಿಗೆ ಬಿದ್ದು ನಮಸ್ಕರಿಸಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಬಿಜೆಪಿಯಲ್ಲಿ ಚುನಾವಣೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿವೆ. ಈ ಸಭೆ ರಾಮ್‌ಲಾಲ್ ನೇತೃತ್ವದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ಪೂರ್ವ ತಯಾರಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಕಾರಾತ್ಮಕ ಪ್ರತಿಫಲ ಪಡೆಯಲು ಈ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.
ಇದಲ್ಲದೇ ಆಡಳಿತ ಪಕ್ಷದ ನ್ಯೂನ್ಯತೆಯ ಬಗ್ಗೆ ತಿಳಿದು, ಅವರ ಅಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವಂತೆ ಮಾಡುವುದರ ಜೊತೆಯಲ್ಲಿ ಕೆಳಹಂತದಿಂದ ಪಕ್ಷವನ್ನು ಬಲಿಷ್ಠ ಮಾಡಬೇಕು ಅನ್ನೋ ಉದ್ದೇಶ ಕೂಡ ಈ ಸಭೆಯಲ್ಲಿ ಚರ್ಚೆ ಆಗಲಿದೆ. ಅಲ್ಲದೆ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.