ನೆಲಮಂಗಲ: ಟ್ಯೂಷನ್ಗಾಗಿ ಮನೆಗೆ ಬರುತ್ತಿದ್ದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಕಾಮುಕನನ್ನು ಬಂಧಿಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರವಿಕಿರಣ್ @ಕಿರಣ್ (26) ಬಂಧಿತ ಆರೋಪಿ. ಪೋಕ್ಸೋ ಕಾಯ್ದೆಯಡಿ ಕಾಮುಕ ರವಿಕಿರಣ್ನನ್ನು ಬಂಧಿಸಲಾಗಿದೆ.
ಆರೋಪಿಯ ಪತ್ನಿ ಬಳಿ ಟ್ಯೂಷನ್ಗೆ ಬರುತ್ತಿದ್ದ ಎಸ್ಎಸ್ಎಲ್ಸಿ ಓದುವ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗುತ್ತಿದೆ. ಮಗಳ ಮೇಲೆ ಅತ್ಯಾಚಾರವಾಗಿದ್ದರೂ ಮರ್ಯಾದೆಗೆ ಅಂಜಿ ಸಂತ್ರಸ್ತ ಬಾಲಕಿಯ ಪೋಷಕರು ಗೌಪ್ಯತೆ ಕಾಪಾಡಿಕೊಂಡಿದ್ದರು.