ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮೇಲೆ ರವಿ ಡಿ.ಚನ್ನಣ್ಣನವರ್ ಇದೇ ಮೊದಲ ಬಾರಿಗೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ್ದು, ಅವರನ್ನು ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಿದರು.
ಮೊದಲ ಬಾರಿ ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ರವಿ ಡಿ.ಚನ್ನಣ್ಣನವರ್... ಅದ್ಧೂರಿ ಸ್ವಾಗತ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ರವಿ ಡಿ.ಚನ್ನಣ್ಣನವರ್ ಪ್ರತಿ ಪೊಲೀಸ್ ಠಾಣೆಗೆ ಭೇಟಿ ನೀಡುತ್ತಿದ್ದು, ದೊಡ್ಡಬಳ್ಳಾಪುರ ನಗರಕ್ಕೆ ಭೇಟಿ ನೀಡಿ ಜನ ಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರ ಸಮಸ್ಯೆ ಆಲಿಸಿದರು.
ಇದೇ ಮೊದಲ ಬಾರಿಗೆ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿದ ರವಿ ಚನ್ನಣ್ಣನವರ್ರನ್ನು ಸ್ವಾಗತಿಸಲು ಸಾಕಷ್ಟು ಸಾರ್ವಜನಿಕರು ಸೇರಿದ್ದು, ಹೂವು-ಹಾರ ಹಾಕಿ, ಪಟಾಕಿ ಸಿಡಿಸಿ ನೂತನ ಎಸ್ಪಿಯವರಿಗೆ ಅದ್ಧೂರಿ ಸ್ವಾಗತ ಕೋರಿದ್ರು. ಬಳಿಕ ಜನ ಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ ರವಿ ಅವರು, ದೊಡ್ಡಬಳ್ಳಾಪುರ ಉಪ ವಿಭಾಗದ 5 ಸ್ಟೇಷನ್ ವ್ಯಾಪ್ತಿಯ ಜನರ ಸಮಸ್ಯೆ ಆಲಿಸಿದರು. ದೊಡ್ಡಬಳ್ಳಾಪುರ ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಬಗ್ಗೆ ಸಾಕಷ್ಟು ಬೇಡಿಕೆ ಬಂದಿರುವ ಹಿನ್ನೆಲೆ, ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ರು.
ಜೊತೆಗೆ ಪಟ್ಟಣದಲ್ಲಿ ಪುಂಡಪೋಕರಿಗಳ ಹಾವಳಿ ಹೆಚ್ಚಾಗಿದೆ. ಪುಂಡರ ಬೈಕ್ ವೀಲಿಂಗ್ನಿಂದ ಅಮಾಯಕ ಜನರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ. ಪುಂಡಾಂಟ ಆಡೋರಿಗೆ ಕೇಸ್ ಖಾಯಂ, ಒದೆ ಬೋನಸ್ ಎಂದು ಎಚ್ಚರಿಕೆ ನೀಡಿದರು. ಹಾಗೆಯೇ ಗಾಂಜಾ ದಂಧೆಗೂ ಕಡಿವಾಣ ಹಾಕುವ ಎಚ್ಚರಿಕೆ ನೀಡಿದರು.