ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಬೆಂಗಳೂರಿನ ಶಿವಾಜಿ ನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆಬೆಲ್ ರೋಷನ್! - ರೋಷನ್
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಬೆಂಗಳೂರಿನ ಶಿವಾಜಿ ನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸೌಧಕ್ಕೆ ಆಗಮಿಸಿದ ಅವರು ಸ್ಫೀಕರ್ ರಮೇಶ್ ಕುಮಾರ್ಗೆ ರಾಜೀನಾಮೆ ಸಲ್ಲಿಸಿದ್ರು.ಈ ಬಗ್ಗೆ ಪ್ರತಿಕ್ರಿಯಿಸಿರುವ ಬೇಗ್ ನಾನು ನನ್ನ ಸ್ವ ಇಚ್ಛೆಯಿಂದ ಸ್ಪೀಕರ್ಗೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದರು.
ಈ ವೇಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಜೆ ಜಾರ್ಜ್, ಕೃಷ್ಣಬೈರೇಗೌಡ ಸ್ಪೀಕರ್ ಕಚೇರಿಯಲ್ಲಿದ್ದಾಗಲೇ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ವಿಶೇಷ.ಕೆಲ ದಿನಗಳ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಕಾಂಗ್ರೆಸ್ನಿಂದ ರೋಷನ್ ಬೇಗ್ ಅವರನ್ನ ಅಮಾನತು ಮಾಡಲಾಗಿತ್ತು.