ಬೆಂಗಳೂರು: ಮಿತ್ರ ಪಕ್ಷದಲ್ಲಿ ಭಿನ್ನಭಿಪ್ರಾಯ, ವಿಶ್ವಾಸದ ಕೊರತೆ ಇರುವುದು ಬಹಿರಂಗಗೊಂಡಿದೆ. ಹಾಗಾಗಿ ಈ ಸರ್ಕಾರ ಮುಂದುವರೆಯುವುದರಲ್ಲಿ ಯಾವುದೇ ನೈತಿಕತೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುವುದು ಗೌರವಯುತ ಕೆಲಸ ಎಂದು ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿ ಹೇಳಿದರು.
ಕುಮಾರಸ್ವಾಮಿ ರಾಜೀನಾಮೆ ನೀಡುವುದು ಗೌರವಯುತ ಕೆಲಸ: ಬಸವರಾಜ್ ಬೊಮ್ಮಾಯಿ - ಶಾಸಕ ಬಸವರಾಜ್ ಬೊಮ್ಮಾಯಿ ಆಗ್ರಹ, ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜಿನಾಮೆ ನೀಡಲಿ, ಮುರುಗೇಶ್ ನಿರಾಣಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು
ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಇನ್ನು ಈ ಸರ್ಕಾರ ಮುಂದುವರೆಯುವುದರಲ್ಲಿ ಯಾವುದೇ ನೈತಿಕತೆ ಇಲ್ಲ. ಆದ್ದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದು ಗೌರವಯುತ ಕೆಲಸ ಎಂದು ಶಾಸಕ ಬಸವರಾಜ್ ಬೊಮ್ಮಾಯಿ ಹೇಳಿದರು.
ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಬಿಜೆಪಿ ಶಾಸಕರಾದ ಬಸವರಾಜ್ ಬೊಮ್ಮಾಯಿ ಹಾಗೂ ಮುರುಗೇಶ್ ನಿರಾಣಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ಸಾಬೀತಾಗಿದೆ. ಮಿತ್ರ ಪಕ್ಷದಲ್ಲಿ ಭಿನ್ನಾಭಿಪ್ರಾಯ, ವಿಶ್ವಾಸಕೊರತೆ ಬಹಿರಂಗಗೊಂಡಿದೆ. ಈ ಸರ್ಕಾರ ಮುಂದುವರೆಯುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ, ಸಂಖ್ಯಾ ಬಲವೂ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದು ಗೌರವಯುತ ಕೆಲಸ ಎಂದರು.
TAGGED:
Devanahalli