ನೆಲಮಂಗಲ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯು ರಸ್ತೆಗೆ ಉರುಳಿ ಬಿದಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿತು.
ನೆಲಮಂಗಲದಲ್ಲಿ ಲಾರಿಗಳ ನಡುವೆ ಡಿಕ್ಕಿ: ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು - ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ನಡುವೆ ಡಿಕ್ಕಿ
ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಲಾರಿ ಡಿಕ್ಕಿ
ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಯೂಟರ್ನ್ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಏಷ್ಯನ್ ಪೇಂಟ್ಸ್ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪೇಂಟ್ಸ್ ತುಂಬಿದ ಲಾರಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಎರಡು ಬದಿ 3 ರಿಂದ 4 ಕಿ.ಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಪೊಲೀಸರು, ಟ್ರಾಫಿಕ್ ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ:ರಸ್ತೆ ಪಕ್ಕ ನಿಂತಿದ್ದ ಬೈಕ್ಗೆ ಗುದ್ದಿದ ಕಾರ್.. ಡಿಕ್ಕಿ ರಭಸಕ್ಕೆ ತೂರಿಬಿದ್ದ ತಂದೆ ಮಕ್ಕಳು- ವಿಡಿಯೋ