ನೆಲಮಂಗಲ: ಬೈಕ್ಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕೆರೆಕತ್ತಿಗನೂರು ಬಳಿ ಘಟನೆ ನಡೆದಿದೆ.
ಹಿಂಬದಿಯಿಂದ ಬೈಕ್ಗೆ ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೆ ಸಾವು - undefined
ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹಿಂಬಂದಿಯಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಸಾವೀಗಿಡಗಿರುವ ಘಟನೆ ನಡೆದಿದೆ.
![ಹಿಂಬದಿಯಿಂದ ಬೈಕ್ಗೆ ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೆ ಸಾವು](https://etvbharatimages.akamaized.net/etvbharat/prod-images/768-512-3128331-thumbnail-3x2-benki.jpg)
ಕಾಂತರಾಜು,ಮೃತ ವ್ಯಕ್ತಿ
ಕಾಂತರಾಜು (30) ಮೃತ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ಅಪಘಾತ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಬೈಕ್ಗೆ ಲಾರಿ ಹಿಂಬದಿಯಿಂದ ಗುದ್ದಿದೆ. ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.