ದೊಡ್ಡಬಳ್ಳಾಪುರ (ಬೆಂ.ಗ್ರಾ): ಅಂಗಡಿಗಳಿಂದ ಫೈನಾನ್ಸ್ ಬಾಕಿ ಹಣ ತೆಗೆದುಕೊಂಡು ಮರಳುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ರೈಲ್ವೆ ಸ್ಟೇಷನ್ ಹತ್ತಿರದ ಮಮತಾ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ ದೂರವಾಣಿನಗರದ ನಿವಾಸಿ ಗೌತಮ್ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಅಂಗಡಿಗಳಿಂದ ಬಾಕಿ ಹಣ ಕಲೆಕ್ಷನ್ಗಾಗಿ ಬೈಕ್ನಲ್ಲಿ ತೆರಳಿದ್ದರು. ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಫೈನಾನ್ಸ್ ಹಣ ಕಲೆಕ್ಷನ್ ಮಾಡಿಕೊಂಡು ಬೆಂಗಳೂರಿನತ್ತ ತೆರಳುವಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ.