ಕರ್ನಾಟಕ

karnataka

ETV Bharat / state

ಹಾಡಹಗಲೇ ಮುತ್ತೂಟ್ ಫೈನಾನ್ಸ್​​ನಲ್ಲಿ ದರೋಡೆ!

ಬೆಳಗ್ಗೆ ಸುಮಾರು 9 ಗಂಟೆಗೆ‌ ಹೊಸೂರಿನ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿದ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ.

robbery-in-mutthoot-finance-office
robbery-in-mutthoot-finance-office

By

Published : Jan 22, 2021, 3:44 PM IST

ಆನೇಕಲ್/ಹೊಸೂರು:ಸಿನಿಮೀಯ ರೀತಿಯಲ್ಲಿ ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆ ನಡೆದಿದೆ. 7 ಕೋಟಿ ರೂ. ನಗದು ಹಾಗೂ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆ

ತಮಿಳುನಾಡಿನ ಗಡಿ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 9 ಗಂಟೆಗೆ‌ ಹೊಸೂರಿನ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿದ ಕಳ್ಳರು, ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್​ನನ್ನು ಕಟ್ಟಿ ಹಾಕಿ ಹಣ ದೋಚಿ ಪರಾರಿಯಾಗಿದ್ದಾರೆ.

6 ಮಂದಿ ಖದೀಮರು ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ‌ ನೀಡಿ ಕಳ್ಳರ ಸೆರೆಗೆ ಬಲೆ ಬೀಸಿದ್ದಾರೆ.

ABOUT THE AUTHOR

...view details