ದೇವನಹಳ್ಳಿ:ಮುಖ್ಯಮಂತ್ರಿಗಳ ಕಚೇರಿಯಲ್ಲಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ 2 ಕೋಟಿ ರೂ. ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಂಚಾಯತ್ ಅಧಿಕಾರಿಗಳು ಶಾಸಕರ ಜೊತೆ ಇದ್ದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ನೀಡಿದ ಅಣ್ಣೇಶ್ವರ ಗ್ರಾಮ ಪಂಚಾಯಿತಿ - Checks Distribution
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿಯು 2 ಕೋಟಿ ಹಣ ನೀಡಿದೆ.
![ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ನೀಡಿದ ಅಣ್ಣೇಶ್ವರ ಗ್ರಾಮ ಪಂಚಾಯಿತಿ Rs. 2 Crore Checks Distribution](https://etvbharatimages.akamaized.net/etvbharat/prod-images/768-512-7531490-394-7531490-1591632727104.jpg)
ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂ. ಚೆಕ್ ವಿತರಣೆ
ಅಣ್ಣೇಶ್ವರ ಗ್ರಾ.ಪಂ ವ್ಯಾಪ್ತಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬರಲಿದ್ದು, ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಹಾಕಿರುವ ಜಾಹೀರಾತು ಫಲಕ ಮತ್ತು ಇತರೆ ತೆರಿಗೆ ಸೇರಿ 50 ಕೋಟಿ ಹಣ ಪಂಚಾಯತಿಗೆ ಬರಬೇಕಿದೆ. ಈ ತೆರಿಗೆ ಹಣ ಬಂದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ಪಂಚಾಯತಿ ಅಧ್ಯಕ್ಷರು ತಿಳಿಸಿದರು.