ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರವಿ ಡಿ ಚೆನ್ನಣ್ಣನವರ್, ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ರೆ ಹುಷಾರ್: ಖಡಕ್ ವಾರ್ನಿಂಗ್ ಕೊಟ್ಟ ಚೆನ್ನಣ್ಣನವರ್ - ವಾಹನ ಸವಾರರಿಗೆ ಖಡಕ್ ವಾರ್ನಿಂಗ್
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರವಿ ಡಿ ಚೆನ್ನಣ್ಣನವರ್, ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ವಾಹನ ಸವಾರರೇ ಹುಷಾರ್: ಖಡಕ್ ಎಚ್ಚರಿಕೆ ಕೊಟ್ಟ ಎಸ್ಪಿ ರವಿ ಡಿ ಚೆನ್ನಣ್ಣನವರ್
ಪಟ್ಟಣದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ ಬೆಂಗಳೂರು ನಗರಕ್ಕೆ ಸಿಮೀತವಾಗಿದ್ದ ಸಂಚಾರ ನಿಯಮ ಪಾಲನೆ ಇನ್ನು ಮುಂದೆ ಗ್ರಾಮಾಂತರ ಪ್ರದೇಶಗಳಿಗೂ ಅನ್ವಯವಾಗುತ್ತೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಖಂಡಿತಾ ದಂಡ ಬಿಳುತ್ತೆ ಎಂದು ತಿಳಿಸಿದ್ದಾರೆ.
ಕುಡಿದು ವಾಹನ ಚಾಲನೆ ಮಾಡಿದರೆ, ಅಡ್ಡಾದಿಡ್ಡಿಯಾಗಿ, ವೇಗವಾಗಿ ವಾಹನ ಚಾಲನೆ ಮಾಡಿದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುತ್ತೇವೆ. ಜೊತೆಗೆ ವಾಹನ ಪರವಾನಗಿಯನ್ನು ಕೂಡ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.