ನೆಲಮಂಗಲ: ಯೂಟರ್ನ್ ತೆಗೆದುಕೊಳ್ಳುವಾಗ ಸ್ಕೂಟರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಗುಂಡೇನಹಳ್ಳಿ ಬಳಿ ನಡೆದಿದೆ.
ಸ್ಕೂಟರ್ಗೆ ಬಸ್ ಡಿಕ್ಕಿ: ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಸ್ಕೂಟರ್ಗೆ ಬಸ್ ಡಿಕ್ಕಿ
ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಗುಂಡೇನಹಳ್ಳಿ ಬಳಿ ಸ್ಕೂಟರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಕೂಟರ್ಗೆ ಬಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೆರೆಕತ್ತಿಗನೂರು ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ರಾಮಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಅಗಲೀಕರಣ ಮಾಡದೇ ಇರುವುದರಿಂದ ಪದೇ ಪದೆ ಕೆರೆಕತ್ತಿಗನೂರು, ಹನುಮಂತಪುರ, ಗುಂಡೇನಹಳ್ಳಿ ಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸುತ್ತಿರುತ್ತವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಅಗಲೀಕರಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.