ದೇವನಹಳ್ಳಿ: ಚೀನಾ ದೇಶದಲ್ಲಿ ಕೊರೊನಾ ಒಮಿಕ್ರಾನ್ ಉಪತಳಿಯ ಆರ್ಭಟದ ಹಿನ್ನೆಲೆ ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಲು ಕ್ರಮವಹಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಿನ್ನೆಯಿಂದ ಸ್ಕ್ರೀನಿಂಗ್ ಓಪನ್ ಮಾಡಲಾಗಿದೆ.
ಏರ್ಪೋರ್ಟ್ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ನಿನ್ನೆಯಿಂದ ಪ್ರಯಾಣಿಕರ ಸ್ಕ್ರೀನಿಂಗ್ ಮಾಡಿ ಜ್ವರ ಮತ್ತು ಕೊರೊನಾ ಲಕ್ಷಣಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಮೂರು ಪಾಳಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರಿಗೆ ಮಾತ್ರ ಸ್ಕ್ರೀನಿಂಗ್ ಮಾಡಲಾಗುತ್ತಿದೆ.