ನೆಲಮಂಗಲ : ಲೈಂಗಿಕ ಬಯಕೆ ತೀರಿಸಿಕೊಳ್ಳಲು ಮಹಿಳೆಯನ್ನು ಪೀಡಿಸುತ್ತಿದ್ದವನ ಮೇಲೆ ಮಹಿಳೆ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ, ಮಚ್ಚಿನೇಟಿನಿಂದ ಹಲ್ಲೆಗೊಳಗಾದ ವ್ಯಕ್ತಿಯ ಕುಟುಂಬಸ್ಥರು ಮಹಿಳೆ ಕಾಲಿಗೆ ಮಚ್ಚಿನಿಂದಲೇ ಹಲ್ಲೆ ನಡೆಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ.. ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ - ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ
ನೆಲಮಂಗಲದಲ್ಲಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದವನಿಗೆ ಮಹಿಳೆ ಮಚ್ಚಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ತಾಲೂಕಿನ ಶಾಂತಿಗ್ರಾಮದಲ್ಲಿ ಘಟನೆ ನಡೆದಿದ್ದು, ಆಂಜನಮೂರ್ತಿ(35) ಎನ್ನುವ ವ್ಯಕ್ತಿ ಅದೇ ಗ್ರಾಮದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ನಿನ್ನೆ ಸಂಜೆ ಮಹಿಳೆ ಬಳಿ ದುರ್ವರ್ತನೆ ತೋರಿದ್ದು, ಆಕೆ ಎಳನೀರು ಕೊಚ್ಚುವ ಮಚ್ಚಿನಿಂದ ಹಲ್ಲೆ ನಡೆಸಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಆಂಜನಮೂರ್ತಿ ಕುಟುಂಬಸ್ಥರು, ಮಹಿಳೆ ಮೇಲೂ ಹಲ್ಲೆ ನಡೆಸಿದ್ದಾರೆ. ಗಾಯಾಳು ಆಂಜನಮೂರ್ತಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮಹಿಳೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.