ನೆಲಮಂಗಲ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರ ಪುತ್ರ ಗಣೇಶ್ ಪ್ರಯಾಣಿಸುತ್ತಿದ್ದರು ಎನ್ನಲಾದ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಶಾಮನೂರು ಪುತ್ರ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ: ಬೈಕ್ ಸವಾರ ಸಾವು - Former Minister Shamanoor Sivasankarappa Son Car met accident]
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರ ಪುತ್ರ ಗಣೇಶ್ ಪ್ರಯಾಣಿಸುತ್ತಿದ್ದರು ಎನ್ನಲಾದ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಶಾಮನೂರು ಶಿವಶಂಕರಪ್ಪ ಪುತ್ರನ ಕಾರು ಡಿಕ್ಕಿ
ನೆಲಮಂಗಲ ತಾಲೂಕಿನ ಜಿಂದಾಲ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬೆಂಗಳೂರಿಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಗಣೇಶ್ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.
ಮೃತ ಬೈಕ್ ಸವಾರನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
TAGGED:
ಶಾಮನೂರು ಶಿವಶಂಕರಪ್ಪರ ಮಗ ಅಪಘಾತ