ಹೊಸಕೋಟೆ: ಕಾಂಗ್ರೆಸ್ ಸೇರುವ ಬಗ್ಗೆ ಪಕ್ಷದ ದೊಡ್ಡವರ ನಡುವೆ ಮಾತುಕತೆ ನಡೆಯುತ್ತಿದೆ. ಆದರೂ ಹೊಸ ವರ್ಷದಲ್ಲಿ ತಾಲೂಕಿನ ಜನರಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿಕೆ ನೀಡಿದ್ದಾರೆ.
ತಾಲೂಕಿನ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತಿಗಳು ಕೂಡ ನಿರ್ಣಾಯಕ ಪಾತ್ರ ವಹಿಸಲಿದ್ದು ,ಚುನಾವಣೆ ಯಶಸ್ವಿಯಾಗಿ ಮುಗಿದಿದೆ. ಇನ್ನು ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಮೀಸಲಾತಿ ಬಂದರೂ ಇಬ್ಬರಿಗೆ 2 ಅವಧಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ತಾಲೂಕಿನ 26 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ 23 ಗ್ರಾಮ ಪಂಚಾಯಿತಿಗಳಲ್ಲಿ ನನ್ನ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿ ಸಂತಸ ತಂದಿದ್ದಾರೆ. ಈ ಚುನಾವಣೆಯ ಫಲಿತಾಂಶ ಹೊಸಕೋಟೆ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ. 494 ಸದಸ್ಯರ ಪೈಕಿ 327 ಸದಸ್ಯರು ನನ್ನ ಬೆಂಬಲಿತ ಸದಸ್ಯರಾಗಿದ್ದು, ಶೇ 70 ರಷ್ಟು ಮತದಾರರು ನನ್ನನ್ನು ಬೆಂಬಲಿಸಿದ್ದಾರೆ. ಇದರಿಂದ ತಾಲೂಕಿನಲ್ಲಿ ಜವಾಬ್ದಾರಿ ಹೆಚ್ಚಾಗಿದ್ದು, ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದರು.