ನೆಲಮಂಗಲ: ತಾಲೂಕಿನ 150ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರಾಮ್ನಿವಾಸ್ ಸಪೇಟ್, ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಅಪರಾಧ ಕೃತ್ಯಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿದರು.
ರೌಡಿಶೀಟರ್ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ
ನೆಲಮಂಗಲ ವಿಭಾಗದ 5 ಠಾಣೆಗಳ ವ್ಯಾಪ್ತಿಯ ಸುಮಾರು 150ಕ್ಕೂ ಅಧಿಕ ರೌಡಿ ಶೀಟರ್ಗಳಿಗೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ.
ಇಲ್ಲಿನ ನೆಲಮಂಗಲ ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರೌಡಿಗಳ ಪರೇಡ್ ನಡೆಸಿದರು. ಬೆಂಗಳೂರು ಗ್ರಾಮಾಂತರ ಎಸ್ಪಿ ರಾಮ್ನಿವಾಸ್ ಸಪೇಟ್ ನೇತೃತ್ವದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.
ನೆಲಮಂಗಲ ವಿಭಾಗದ 5 ಠಾಣೆಗಳ ವ್ಯಾಪ್ತಿಯ ಸುಮಾರು 150ಕ್ಕೂ ಹೆಚ್ಚು ರೌಡಿ ಶೀಟರ್ಸ್ಗಳು ಪರೇಡ್ನಲ್ಲಿ ಹಾಜರಿದ್ದರು.ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸಲಾಯಿತು. ಅಪರಾಧ ಕೃತ್ಯ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಚಿಸಿದರು. ರೌಡಿಶೀಟರ್ಗಳ ಕೇಸ್ಗಳನ್ನು ವಿವರವಾಗಿ ಪರಿಶೀಲಿಸಿದರು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳುವಂತೆ ಆದೇಶ ನೀಡಿದರು. ಹದ್ದು ಮೀರಿ ನಡೆದುಕೊಂಡಲ್ಲಿ ಕಠಿಣ ಕ್ರಮಗಳ ಜತೆಗೆ ಗುಂಡಾ ಕಾಯ್ದೆ ಹಾಕುವುದಾಗಿ ಎಚ್ಚರಿಸಿದರು. ಗೌರವದ ಬದುಕು ಕಟ್ಟಿಕೊಳ್ಳಿ ಎಂದು ಬುದ್ಧಿವಾದ ಹೇಳಿದರು.