ನೆಲಮಂಗಲ/ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ರವಿ ಡಿ. ಚನ್ನಣ್ಣನವರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ.
ಎಸ್ಪಿ ರವಿ ಡಿ. ಚನ್ನಣ್ಣನವರ್ರಿಂದ ಮತ್ತೆ ಗ್ರಾಮ ವಾಸ್ತವ್ಯ - sp ravi d chennanavar visits to Are bommanahalli village
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ರವಿ ಡಿ. ಚನ್ನಣ್ಣನವರ್ ಗ್ರಾಮಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು, ಪೊಲೀಸರು ಇರುವುದೇ ಜನರ ಸೇವೆ ಮತ್ತು ರಕ್ಷಣೆಗಾಗಿ. ಪೊಲೀಸರ ಬಗ್ಗೆ ಇರುವ ಭಯವನ್ನು ಜನರಿಂದ ಹೋಗಲಾಡಿಸಿ ಅವರಲ್ಲಿ ಭರವಸೆ ಮೂಡಿಸುವ ಕೆಲಸ ಪೊಲೀಸ್ ಇಲಾಖೆ ಮಾಡುತ್ತಿದೆ ಎಂದರು.
ವೀರಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಶಾಲಾ ಅವರಣದಲ್ಲಿ ಸಸಿ ನೆಟ್ಟರು. ಶಾಲಾ ಮಕ್ಕಳಿಗೆ ನೋಟ್ಬುಕ್ ಹಾಗೂ ಬೀಟ್ ಸದಸ್ಯರಿಗೆ ಐಡಿ ಕಾಡ್೯ ವಿತರಿಸಿದ್ರು. ಸರ್ಕಾರಿ ಶಾಲೆಯಲ್ಲಿ ಗ್ರಾಮಸ್ಥರೊಂದಿಗೆ ಮುದ್ದೆ ಊಟ ಸವಿದರು. ಶಾಲೆಯಲ್ಲಿಯೇ ನಿದ್ದೆ ಮಾಡಿ ವಿಶ್ರಾಂತಿ ಪಡೆದರು. ಬೆಳಗ್ಗೆ ಅರೇಬೊಮ್ಮನಹಳ್ಳಿ ಬೆಟ್ಟ ವೀಕ್ಷಣೆ ಮಾಡುವ ಮೂಲಕ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಂಡ್ರು.