ನೆಲಮಂಗಲ :ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ( ಬಿಐಇಸಿ) ತಾತ್ಕಾಲಿಕ ಕೋವಿಡ್ ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ. ಬಿಐಇಸಿ ಕೇಂದ್ರಕ್ಕೆ ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಭೇಟಿ ನೀಡಿ ಪರಿಶೀಲಿಸಿದರು.
7 ಸಾವಿರ ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ಗೆ ಎಸ್ ಆರ್ ವಿಶ್ವನಾಥ್ ಭೇಟಿ.. - ನೆಲಮಂಗಲ
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಬಿಐಇಸಿಯಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಜುಲೈ 9ರೊಳಗೆ ಇದರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ..
ಬಿಐಇಸಿ ಕೇಂದ್ರಕ್ಕೆ ಇಂದು ಎಸ್.ಆರ್ ವಿಶ್ವನಾಥ್ ಭೇಟಿ
ವಿಶ್ವನಾಥ್ ಜೊತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅನಿಲ್ ಕುಮಾರ್ ಮತ್ತು ಇತರ ಅಧಿಕಾರಿಗಳು ಕೋವಿಡ್ ಆರೋಗ್ಯ ಕೇಂದ್ರದ ಕಾಮಗಾರಿ ಪರಿಶೀಲನೆ ನಡೆಸಿದರು. ನಂತರ 7 ಸಾವಿರಕ್ಕೂ ಹೆಚ್ಚು ಬೆಡ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಬಿಐಇಸಿಯಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾಮಗಾರಿ ಪರಿಶೀಲನೆ ನಡೆಸಿದ ಎಸ್ ಆರ್ ವಿಶ್ವನಾಥ್ ಜುಲೈ 9ರೊಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.