ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿವೋರ್ವ ನೇಣಿಗೆ ಶರಣಾಗಿದ್ದಾನೆ. ಈತನ ಸಾವಿಗೆ ಪ್ರೇಮ ವೈಫಲ್ಯ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರದಲ್ಲಿ ನೇಣಿಗೆ ಶರಣಾದ ಪದವಿ ವಿದ್ಯಾರ್ಥಿ: ಕಾರಣ? - committed-suicide
ದೊಡ್ಡಬಳ್ಳಾಪುರ ನಗರದ ದರ್ಗಾ ಜೋಗಹಳ್ಳಿ ನಿವಾಸಿ ಪ್ರಶಾಂತ್ (22) ನೇಣಿಗೆ ಶರಣಾಗಿದ್ದಾನೆ. ಪ್ರಶಾಂತ್ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ.
ಮೃತ ಪ್ರಶಾಂತ್
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಪ್ರಶಾಂತ್ (22) ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ನಗರ ಹೊರವಲಯದ ದರ್ಗಾ ಜೋಗಹಳ್ಳಿಯ ನಿವಾಸಿ ಎಂದು ತಿಳಿದುಬಂದಿದೆ.
ಪ್ರೇಮ ವೈಫಲ್ಯ ಮತ್ತು ಮನೆಯ ಪರಿಸ್ಥಿತಿಯ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.