ಬೆಂಗಳೂರು:ರಾಯಚೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣವನ್ನು ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಐಡಿಎಸ್ಓ ಸಂಘಟನೆ ಹಾಗೂ ಕೆ.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ... ಸೂಕ್ತ ತನಿಖೆಗೆ ಅಗ್ರಹಿಸಿ ಪ್ರತಿಭಟನೆ
ಕೆ.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ಬಳಿ ಮಾನವ ಸರಪಳಿ ನಿರ್ಮಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ದೇಶದಲ್ಲಿ ಪ್ರತಿ 8 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆ ಕಳೆದ 20 ವರ್ಷಗಳಿಂದ ಕೋಟ್ಯಾಂತರ ಹೆಣ್ಣು ಮಕ್ಕಳು ವಿವಿಧ ರೀತಿಯ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ. ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಕಾನೂನು ತರುವಲ್ಲಿ ಸರ್ಕಾರಗಳು ವಿಫಲವಾಗಿವೆ. ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಇಲ್ಲವಾದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ಬೃಹತ್ ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಸಿದ್ದಾರೆ.