ನೆಲಮಂಗಲ(ಬೆಂಗಳೂರು ಗ್ರಾಮಾಂತರ): ರಾಜ್ಯದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಪಕ್ಷಕ್ಕೆ ರೌಡಿಶೀಟರ್ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಡಾ. ಕೆ ಸುಧಾಕರ್ ಕಿಡಿಕಾರಿದ್ದಾರೆ.
ಬಿಜೆಪಿಗೆ ರೌಡಿಶೀಟರ್ ಸೇರ್ಪಡೆ ವಿಚಾರ: ಸಿದ್ಧರಾಮಯ್ಯ ಹೇಳಿಕೆಗೆ ಸುಧಾಕರ್ ಕಿಡಿ
ಬಿಜೆಪಿ ಪಕ್ಷದಲ್ಲಿ ಕ್ರಿಮಿನಲ್ ಬ್ಯಾಗ್ರೌಂಡ್ ಇರುವವರಿಗೆ ಅವಕಾಶ ಇಲ್ಲ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ತಾಲೂಕಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಕಾಂಗ್ರೆಸ್ ಪಕ್ಷದಲ್ಲಿ ಎಷ್ಟು ಜನರ ಮೇಲೆ ಕ್ರಿಮಿನಲ್ ಕೇಸ್ಗಳು ದಾಖಲಾಗಿವೆ. ಮತ್ತು ನಮ್ಮ ಪಕ್ಷದಲ್ಲಿ ಎಷ್ಟು ಜನರ ಮೇಲೆ ಕ್ರಿಮಿನಲ್ ಕೇಸ್ಗಳು ಇದಾವೆ ಎಂಬುದು ಒಮ್ಮೆ ತನಿಖೆ ಆಗಲಿ. ಅಲ್ಲದೇ ಕ್ರಿಮಿನಲ್ ಬ್ಯಾಗ್ರೌಂಡ್ ಅಥವಾ ಚಾರ್ಜ್ ಶೀಟ್ ಇದ್ದಲ್ಲಿ ತನಿಖೆಯ ವೇಳೆ ಗೊತ್ತಾಗುತ್ತದೆ. ಅಲ್ಲದೇ ಈ ರೀತಿ ಪಕ್ಷದ ಮೇಲೆ ಆರೋಪ ಮಾಡುವುದು ಸರಿಯಲ್ಲ. ನಮ್ಮ ಪಕ್ಷದಲ್ಲಿ ಕ್ರಿಮಿನಲ್ ಬ್ಯಾಗ್ರೌಂಡ್ ಇರುವವರಿಗೆ ಯಾವುದೇ ಅವಕಾಶ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ:ಒಕ್ಕಲಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು: ಜ.23 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ