ನೆಲಮಂಗಲ(ಬೆಂಗಳೂರು ಗ್ರಾಮಾಂತರ) :ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಬಾಗಲಕುಂಟೆಯ ಡಿಫೆನ್ಸ್ ಕಾಲೋನಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳೆನರಸೀಪುರ ಮೂಲದ ಲಕ್ಷ್ಮೀದೇವಿ (42) ಮೃತ ಮಹಿಳೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಾಗಲಗುಂಟೆ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿ ಆತ್ಮಹತ್ಯೆ - ETv Bharat kannada news
ಬೆಂಗಳೂರು ಹೊರವಲಯ ಕಾಲೋನಿಯೊಂದರಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆ
ಈ ವೇಳೆ ಮನೆ ಬಾಗಿಲೊಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಗಂಡನ ಸಾವಿನಿಂದ ಖಿನ್ನತೆ.. ಗೃಹಿಣಿ ಆತ್ಮಹತ್ಯೆ, ಒಂದೂವರೆ ವರ್ಷದ ಮಗು ಅನಾಥ