ಕರ್ನಾಟಕ

karnataka

ETV Bharat / state

ಗಾಂಧಿ ಹೆಸರು ಹೇಳಿಕೊಂಡು ಆಡಳಿತ ನಡೆಸಿದ ಕಾಂಗ್ರೆಸ್ ಜನತೆಗೆ ಟೋಪಿ ಹಾಕಿದೆ: ಕಟೀಲ್ ವ್ಯಂಗ್ಯ - Hoskote Gram Swarajya Program

ದೇಶದಲ್ಲಿ ಹಲವು ವರ್ಷಗಳು ಆಡಳಿತ ನಡೆಸಿದ ಕಾಂಗ್ರೆಸ್ ಗಾಂಧಿ ಹೆಸರು ಹೇಳಿಕೊಂಡು ಜನತೆಗೆ ಟೋಪಿ ಹಾಕಿದೆ. ಕಾಂಗ್ರೆಸ್​ ತನ್ನದೇ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಕಟೀಲ್
ಕಟೀಲ್

By

Published : Dec 2, 2020, 9:21 PM IST

ಹೊಸಕೋಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಪ್ರತಿಯೊಂದು ಗ್ರಾಮದಲ್ಲೂ ಕಮಲ ಅರಳಬೇಕು ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಹೊಸಕೋಟೆಯಲ್ಲಿ ನಡೆದ 'ಗ್ರಾಮ ಸ್ವರಾಜ್ಯ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ದೇಶದ ಪ್ರತಿ ಗ್ರಾಮ ಪಂಚಾಯಿತಿಗೂ ಕೇಂದ್ರ ಸರ್ಕಾರ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಗ್ರಾಮಗಳಲ್ಲಿ ಸಭೆಗಳು ಮಾಡುವುದರ ಮೂಲಕ ಬಿಜೆಪಿ ಸಂಘಟಿಸಬೇಕು ಎಂದರು.

ಪಂಚಾಯಿತಿಯಿಂದ ಪಾರ್ಲಿಮೆಂಟ್‍ವರೆಗೆ ಕಾಂಗ್ರೆಸ್ ಮುಕ್ತ ಮಾಡುವ ಸಂಕಲ್ಪದೊಂದಿಗೆ ಶೇ 80ರಷ್ಟು ಗೆಲುವಿನ ಗುರಿ ಇಟ್ಟಿದ್ದೇವೆ. ಮಹಾತ್ಮ ಗಾಂಧಿಯ ಗ್ರಾಮ ಸ್ವರಾಜ್ಯ, ಪ್ರಧಾನಿಯ ಆದರ್ಶ ಗ್ರಾಮ ಹಾಗೂ ಸಾಮಾನ್ಯ ಕಾರ್ಯಕರ್ತರನ್ನು ನಾಯಕನನ್ನಾಗಿಸುವ ಚಿಂತನೆಯಲ್ಲಿ ಈ ಬಾರಿಯ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್

ದೇಶದಲ್ಲಿ ಹಲವು ವರ್ಷಗಳು ಆಡಳಿತ ನಡೆಸಿದ ಕಾಂಗ್ರೆಸ್ ಗಾಂಧಿ ಹೆಸರು ಹೇಳಿಕೊಂಡು ಜನತೆಗೆ ಟೋಪಿ ಹಾಕಿದೆ. ಕಾಂಗ್ರೆಸ್​ ತನ್ನದೇ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸು ಮಾಡುತ್ತಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್​ ಮಾತನಾಡಿ, ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವುದು ಮುಖ್ಯವಾಗಿದೆ. ಹಳ್ಳಿಗಳಿಂದ ಪಟ್ಟಣ ಪ್ರದೇಶಕ್ಕೆ ವಲಸೆ ಹೋಗುತ್ತಿರುವುದು ಕೂಡಾ ಹಳ್ಳಿಗಳಲ್ಲಿ ಇರದ ಮೂಲಸೌಲಭ್ಯ ಹಾಗೂ ಅವಕಾಶಗಳ ಕೊರತೆಯಿಂದಾಗಿ. ಹೀಗಾಗಿ, ಹಳ್ಳಿಗಳಲ್ಲಿ ಎಲ್ಲಾ ರೀತಿಯ ಸೌಲಭ್ಯ, ಗುಣಮಟ್ಟದ ಸೇವೆಗಳು, ಆರ್ಥಿಕ ಸದೃಢತೆ, ಅವಕಾಶಗಳನ್ನು ಕಲ್ಪಿಸಿಕೊಟ್ಟಾಗ ವಲಸೆ ಪ್ರಮಾಣ ಕಡಿಮೆಯಾಗುತ್ತದೆ. ಸದೃಢವಾದ ದೇಶ ನಿರ್ಮಾಣವಾಗುತ್ತದೆ ಎಂದರು.

ABOUT THE AUTHOR

...view details