ನೆಲಮಂಗಲ:ಆಸ್ಪತ್ರೆ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಆಸ್ಪತ್ರೆ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ಸಾವು - Nelamangala latest news
ಆತ್ಮಹತ್ಯೆಗೆ ಯತ್ನಿಸಿದ್ದ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿದ್ದ. ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾನೆ.
ಕೊರೊನಾ
ತಾಲೂಕಿನ ಹನುಮಂತಗೌಡನಪಾಳ್ಯದ 42 ವರ್ಷದ ಸೋಂಕಿತ ಮೃತ ವ್ಯಕ್ತಿ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜನವರಿ 19 ರಂದು ಆಸ್ಪತ್ರೆಯ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಗಂಭೀರ ಗಾಯಗೊಂಡಿದ್ದ ಸೋಂಕಿತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇಂದು ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಈ ಬಗ್ಗೆ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.