ಆನೇಕಲ್: ಅನುಮಾನಸ್ಪದ ರೀತಿಯಲ್ಲಿ ಯುವಕ ಸಾವನ್ನಪ್ಪಿದ್ದಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಮ್ಮದೇವನಹಳ್ಳಿ ಬಳಿ ನಡೆದಿದೆ.
ಯುವಕ ಅನುಮಾನಾಸ್ಪದ ಸಾವು: ಕೊಲೆ ಶಂಕೆ - ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿ
ಹೊಮ್ಮದೇನಹಳ್ಳಿ ನಿವಾಸಿ ಮೋಹನ್ ಎಂಬ ಯುವಕ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಮ್ಮದೇವನಹಳ್ಳಿ ಬಳಿ ನಡೆದಿದೆ. ಮೃತನ ಕುಟುಂಬದವರು ಇದು ಕೊಲೆ ಎಂದು ಆರೋಪ ಮಾಡಿದ್ದಾರೆ.
ಮೃತ ಯುವಕ ಹೊಮ್ಮದೇನಹಳ್ಳಿ ನಿವಾಸಿ ಮೋಹನ್ (26) ಎಂಬಾತ ರಾತ್ರಿ ಮನೆಗೆ ಹೋಗುವಾಗ ಯಾರೋ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆಂದು ಮೃತ ಮೋಹನ್ ಕುಟುಂಬದವರು ಆರೋಪ ಮಾಡಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಮೃತ ಮೋಹನ್ ಮೂಗು, ಬಾಯಿಂದ ತೀವ್ರ ರಕ್ತ ಹೊರಬಂದಿರುವುದು ಕೊಲೆಯಾಗಿರಬಹುದೆಂಬ ಅನುಮಾನ ಮೂಡಿಸುತ್ತಿದೆ.
ಇನ್ನು ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮೃತ ಮೋಹನ್ ರಾಜ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಇದು ಸಹಜ ಸಾವಲ್ಲ ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.