ಬೆಂಗಳೂರು:ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು.ಬಿ ಬಣಕಾರ್ ಮತ್ತು ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಎಚ್ ನಿಂಗಪ್ಪ, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರ ಜತೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ ಕಾರ್ಯಕರ್ತರು ತಮ್ಮ ನಾಯಕರ ಪರ ಕಾಂಗ್ರೆಸ್ ಪಕ್ಷದ ಕಚೇರಿ ಹೊರಭಾಗ ಘೋಷಣೆ ಕೂಗುತ್ತಾ ನಿಂತ ಸಂದರ್ಭ ಯುವಕನೊಬ್ಬ ಕಾರ್ಯಕರ್ತರ ಜೇಬಿಗೆ ಕತ್ತರಿಹಾಕಲೂ ಮುಂದಾಗಿದ್ದಾನೆ. ಬ್ಲೇಡ್ ಹಾಕಿ ಜೇಬಿನಿಂದ ದುಡ್ಡು ಕದ್ದು ಅದೇ ವ್ಯಕ್ತಿಯ ಉಡುದಾರ ಕದಿಯುವ ಸಂದರ್ಭ ಹಣದ ಸಮೇತ ಸಿಕ್ಕಿಬಿದ್ದಿದ್ದಾನೆ.